ಮಂಡ್ಯ: ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಗೆ ಕೊನೆಗು ಬ್ರೇಕ್ ಬಿದ್ದಿದೆ. ಇಲ್ಲಿನ ಅಕ್ರಮ ಗಣಿಗಾರಿಕೆಯ ಸದ್ದು ಸಂಸದೆ ಸುಮಲತಾ ಅಂಬರೀಶ್ ಮೂಲಕ ದೆಹಲಿವರೆಗೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು 11 ಕ್ವಾರಿಗಳ ಗುತ್ತಿಗೆ ರದ್ದುಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ 11 ಚೆಕ್‍ಪೋಸ್ಟ್ ನಿರ್ಮಿಸಲು ಆದೇಶಿಸಲಾಗಿದೆ. ಏಪ್ರಿಲ್‍ನಿಂದ ಇಲ್ಲಿಯವರೆಗೆ 12 ಪ್ರಕರಣ ದಾಖಲಾಗಿದ್ದು, 119 ವಾಹನ ವಶಕ್ಕೆ ಪಡೆಯಲಾಗಿದೆ. 33.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಇಲಾಖೆ ಅಧಿಕಾರಿ ಪದ್ಮಜಾ ಮಾಹಿತಿ ನೀಡಿದ್ದಾರೆ.
ಜತೆಗೆ ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ನಾಗಮಂಗಲದಲ್ಲಿ ಎ-ಫಾರಂ ಹೊಂದದ 22 ಕ್ರಷರ್ ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಅನಧಿಕೃತ ಕಲ್ಲುಗಣಿಗಾರಿಕೆ, ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಲು ತಾಲೂಕುವಾರು ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿದೆ.
PublicNext
04/08/2021 07:51 am