ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ದೇವತೆಗಳ ಅವಹೇಳನ: ಸಚಿವ ನಿರಾಣಿ ಮೇಲೆ ತನಿಖೆಗೆ ಆದೇಶ

ಬೆಂಗಳೂರು: ಹಿಂದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣ ವಾಟ್ಸ್‌ಆ್ಯಪ್ನಲ್ಲಿ ಸಂದೇಶ ರವಾನಿಸಿದ ಹಿನ್ನೆಲೆಯಲ್ಲಿ ಸಚಿವ ಮುರುಗೇಶ್ ನಿರಾಣಿ ಮೇಲೆ ತನಿಖೆ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ಈ ಪ್ರಕರಣದ ತನಿಖೆ ಜವಾಬ್ದಾರಿ ನೀಡಲಾಗಿದೆ.

ಗೋವಿಂದರಾಮ್‌ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯ, ಸೆ.13ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿದೆ. "ಹಿಂದೂ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ನಿರಾಣಿ ಅವರು ರವಾನಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153, 259, 259ಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಕೊಡಿಗೇಹಳ್ಳಿ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

Edited By : Nagaraj Tulugeri
PublicNext

PublicNext

19/08/2021 09:34 am

Cinque Terre

47.73 K

Cinque Terre

5

ಸಂಬಂಧಿತ ಸುದ್ದಿ