ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು : ಮೂವರು ಕಾನ್ ಸ್ಟೇಬಲ್ ಅಮಾನತು

ಯಾದಗಿರಿ : ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಗುರುವಾರ ಅಮಾನತುಗೊಳಿಸಿದ್ದಾರೆ.

ಪೊಲೀಸ್ ಕಾನ್ಸಟೇಬಲ್ ಗಳಾದ ವಿರೇಶ್, ಸಂತೋಷ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ. ನಿನ್ನೆ ಕೇಂದ್ರ ಸಚಿವ ಭಗವಂತ ಖೂಬಾ ಯರಗೋಳ ಗ್ರಾಮಕ್ಕೆ ಆಗಮಿಸಿದಾಗ, ನಾಡಬಂದೂಕು ಸಿಡಿಸಿ ಸ್ವಾಗತ ಮಾಡಿ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಈಗಾಗಲೇ ಗುಂಡುಹಾರಿಸಿದ ನಾಲ್ವರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪರವಾನಗಿ ಸಹಿತ ಬಂದೂಕುಗಳನ್ನು ಸಹ ವಶಕ್ಕೆ ಪಡೆದಿದ್ದೇವೆ. ಬಂದೂಕು ಪರವಾನಗಿ ರದ್ದು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುತ್ತಿದ್ದೇವೆ ಎಂದರು.

ಇನ್ನು ಬಂದೋಬಸ್ತ್ ವೇಳೆ ಬಂದೂಕಿನಿಂದ ಗುಂಡು ಹಾರಿಸಿದವರನ್ನು ತಡೆಯದೇ ಅಥವಾ ವಿರೋಧಿಸದೇ ಕರ್ತವ್ಯ ನಿರ್ವಹಿಸಲು ವಿಫಲವಾಗಿದ್ದಕ್ಕೆ ಮೂರು ಮಂದಿ ಕಾನ್ಸ್ ಟೇಬಲ್ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Edited By : Nirmala Aralikatti
PublicNext

PublicNext

19/08/2021 06:27 pm

Cinque Terre

51.55 K

Cinque Terre

4

ಸಂಬಂಧಿತ ಸುದ್ದಿ