ಮುಂಬೈ: ಮಹಾರಾಷ್ಟ್ರ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸಚಿವರ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಹಾರಾಷ್ಟ್ರ ಸರ್ಕಾರದ ಈ ಕ್ರಮದಿಂದ ನಾವು ಹಿಂಜರಿಯೋದಿಲ್ಲ ಹಾಗೂ ಈ ಮೂಲಕ ನಮ್ಮನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕಪಾಳಮೋಕ್ಷ ಮಾಡಬೇಕು ಎಂದು ನಾರಾಯಣ ರಾಣೆ ಹೇಳಿದ್ದರು. ಇದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆ ಎಂಬ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರತ್ನಾಗಿರಿ ಪೊಲೀಸರು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅರೆಸ್ಟ್ ಮಾಡಿದ್ದಾರೆ.
PublicNext
24/08/2021 05:01 pm