ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಹಾಗೂ ಅವರನ್ನು ಮಹಾರಾಷ್ಟ್ರದ ರತ್ನಾಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ತಮ್ಮ ಮೇಲೆ ದಾಖಲಾಗಿರುವ ಎಫ್ಐಆರ್‌ಗಳಿಂದ ಹಾಗೂ ಬಂಧನದಿಂದ ರಕ್ಷಣೆ ನೀಡಬೇಕೆಂದು ನಾರಾಯಣ ರಾಣೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಕೀಲ ಅನಿಕೇತ್ ನಿಕಮ್ ಅವರ ಮೂಲಕ ರಾಣೆ ಅವರು ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧದ ಎಫ್ಐಆರ್ ಗಳನ್ನು ರದ್ದುಗೊಳಬೇಕು ಮತ್ತು ತಮ್ಮ ವಿರುದ್ಧ ಬಂಧನ ಅಥವಾ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡಿ ಮಧ್ಯಂತರ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದಾರ್ ಅವರ ವಿಭಾಗೀಯ ಪೀಠದ ಮುಂದೆ ಸಲ್ಲಿಸಲಾಗಿದ್ದು, ಮಂಗಳವಾರವೇ ತುರ್ತು ವಿಚಾರಣೆಗೆ ಕೋರಲಾಗಿದೆ. ವಿಭಾಗೀಯ ಪೀಠ ನೇರವಾಗಿ ತಮಗೆ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ನಿರಾಕರಿಸಿದ್ದು, ಕಾರ್ಯವಿಧಾನವನ್ನು ಅನುಸರಿಸುವಂತೆ ವಕೀಲರಿಗೆ ಸೂಚಿಸಲಾಗಿದೆ.
PublicNext
24/08/2021 06:15 pm