ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತ್ಯಾಚಾರ ಆರೋಪ : ಎಲ್ ಜೆಪಿ ಸಂಸದ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಎಫ್ ಐಆರ್ ದಾಖಲು

ನವದೆಹಲಿ : ಲೋಕ ಜನಶಕ್ತಿ ಪಕ್ಷದ (LJP) ಸಂಸದ ಮತ್ತು ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಅತ್ಯಾಚಾರ ಆರೋಪದಡಿ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಮೂರು ತಿಂಗಳ ಹಿಂದೆಯೇ ಯುವತಿಯೊಬ್ಬಳು ದೆಹಲಿಯ ಕನಾಟ್ ಪ್ರದೇಶದಲ್ಲಿರುವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಈ ಕೇಸ್ ದೆಹಲಿ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಲಯದ ನಿರ್ದೇಶನದ ಅನ್ವಯ ಪೊಲೀಸರು ಇದೀಗ ಸಂಸದ ಪ್ರಿನ್ಸ್ ರಾಜ್ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ.

ಇನ್ನು ತನ್ನ ವಿರುದ್ಧ ಆರೋಪ ಸುಳ್ಳು ಎಂದು ಬಲವಾಗಿ ಪ್ರತಿಪಾದಿಸಿರುವ ಪ್ರಿನ್ಸ್ ರಾಜ್ ಪಾಸ್ವಾನ್, ನನ್ನ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಮಾನ ಹಾನಿ ಮಾಡಲಾಗಿದೆ ಎಂದೂ ಹೇಳಿದ್ದಾರೆ.

Edited By : Nirmala Aralikatti
PublicNext

PublicNext

14/09/2021 01:21 pm

Cinque Terre

142.28 K

Cinque Terre

5

ಸಂಬಂಧಿತ ಸುದ್ದಿ