ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಡಿಕೆಶಿ ವಿರುದ್ಧ ಕೋರ್ಟ್ ವಾರಂಟ್

ಸುಳ್ಯ (ದಕ್ಷಿಣ ಕನ್ನಡ): ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ಸಮನ್ಸ್ ಜಾರಿ ಮಾಡಿದ್ದರೂ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಹಾಜರಾಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಇಲ್ಲಿನ ನ್ಯಾಯಾಲಯವು ಮಂಗಳವಾರ ವಾರಂಟ್ ಜಾರಿ ಮಾಡಿದೆ.

2016ರ ಫೆ. 28ರಂದು ರಾತ್ರಿ ಆಗ ಇಂಧನ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರಿಗೆ ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ ಅವರು ಕರೆ ಮಾಡಿದ್ದರು. ನಿರಂತರವಾಗಿ ಎದುರಾಗುತ್ತಿರುವ ವಿದ್ಯುತ್ ಅಡಚಣೆ ಹಾಗೂ ಸಮಸ್ಯೆ ಬಗ್ಗೆ ದೂರು ಹೇಳಿದ್ದರು. ಇದೇ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿತ್ತು.

ಈ ಕುರಿತು ಶಿವಕುಮಾರ್‌ ಅವರು, ಮೆಸ್ಕಾಂ ಎಂ.ಡಿ ಹಾಗೂ ಸುಳ್ಯ ಕಚೇರಿಯ ಅಂದಿನ ಪ್ರಭಾರ ಎಇಇ ಹರೀಶ್‌ ನಾಯ್ಕ್‌ ಮೂಲಕ ಸಾಯಿ ಗಿರಿಧರ ವಿರುದ್ಧ ಸುಳ್ಯ ಠಾಣೆಗೆ ದೂರು ನೀಡಲಾಗಿತ್ತು. ಇದೇ ದೂರಿನ ಅನ್ವಯ ಪೊಲೀಸರು ಗಿರಿಧರ ರೈ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ಸಾಕ್ಷಿಯಾಗಿದ್ದಾರೆ. ಆದರೆ ಸಾಕ್ಷಿ ಹೇಳಲು ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಇದನ್ನು ಗಂಭೀರ ವಾಗಿ ಪರಿಗಣಿಸಿರುವ ನ್ಯಾಯಾಧೀಶರು, ಶಿವಕುಮಾರ್‌ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೂ ನೋಟಿಸ್‌ ಜಾರಿ ಮಾಡುವಂತೆ ಆದೇಶಿಸಿದ್ದಾರೆ. ಮುಂದಿನ ವಿಚಾರಣೆ ಸೆ. 29ರಂದು ನಡೆಯಲಿದೆ.

Edited By : Nagaraj Tulugeri
PublicNext

PublicNext

15/09/2021 08:21 am

Cinque Terre

88.8 K

Cinque Terre

1

ಸಂಬಂಧಿತ ಸುದ್ದಿ