ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಹುಕಾರನ ರಾಸಲೀಲೆ ಕೇಸ್ : ವಿಚಾರಣೆ ಮುಂದಕ್ಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿಯೇ ಸಂಚಲನ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನ.8ಕ್ಕೆ ಮುಂದೂಡಿದೆ.

ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಿದ ಕ್ರಮ ಪ್ರಶ್ನಿಸಿ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ| ಸತೀಶ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ವಿಚಾರಣೆಗೆ ಬಂದಿದ್ದವು.

ಈ ವೇಳೆ ಸಂತ್ರಸ್ತ ಯುವತಿ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ಯುವತಿ ಪರ ವಾದ ಮಂಡಿಸುತ್ತಿರುವ ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ, ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನ.8ಕ್ಕೆ ಮುಂದೂಡಿದೆ.

Edited By : Nirmala Aralikatti
PublicNext

PublicNext

08/10/2021 07:51 am

Cinque Terre

74.68 K

Cinque Terre

5

ಸಂಬಂಧಿತ ಸುದ್ದಿ