ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ವಿಚಾರಣೆ ನಡೆಸುತ್ತಿರುವ ಸುಪ್ರಿಂ ಕೋರ್ಟ್ ಲಖಿಂಪುರ ಖೇರಿಯಲ್ಲಿ ರೈತರು ಮೃತಪಟ್ಟಿದ್ದಾರೆ. ಅಷ್ಟು ದೊಡ್ಡ ಮಟ್ಟದ ಹಿಂಸಾಚಾರ ನಡೆದಿದೆ. ಆದರೆ ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡಿರುವ ಕ್ರಮ ತೃಪ್ತಿದಾಯಕವಾಗಿಲ್ಲ ಎಂದು ಹೇಳಿದೆ.
ಇನ್ನು ಉತ್ತರಪ್ರದೇಶ ಸರ್ಕಾರದ ಪರ ವಾದ ಮಂಡಿಸಿ, ಘಟನೆಯ ಸ್ಥಿತಿ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಹಿರಿಯ ವಕೀಲ ಹರೀಶ್ ಸಾಲ್ವೆ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾಗೆ ನೋಟಿಸ್ ನೀಡಲಾಗಿದೆ.
ಅವರು ನಾಳೆ ಬೆಳಗ್ಗೆ 11 ಗಂಟೆ ಹೊತ್ತಿಗೆ ಎಸ್ ಐಟಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೊಮ್ಮೆ ನಾಳೆ ಬೆಳಗ್ಗೆ ಅವರು ಬಾರದೇ ಇದ್ದರೆ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಹರೀಶ್ ಸಾಲ್ವೆ ಹೇಳಿದ್ದಾರೆ.
ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಅದರಲ್ಲಿ ನಾಲ್ವರು ರೈತರಾಗಿದ್ದಾರೆ. ಈ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.
PublicNext
08/10/2021 03:05 pm