ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಿಖಿಂಪುರ ಖೇರಿ ಹಿಂಸಾಚಾರ ಆರೋಪಿಗೆ ಜಾಮೀನು ನಿರಾಕರಣೆ

ಲಕ್ನೋ: ಉತ್ತರ ಪ್ರದೇಶದ ಲಿಖಿಂಪುರ ಖೇರಿಯಲ್ಲಿ ರೈತರ ಪ್ರತಿಭಟನೆ ವೇಳೆ ರೈತರ ಮೇಲೆ ಜೀಪ್ ಹತ್ತಿಸಿ ಎಂಟು ಜನ ರೈತರನ್ನು ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾನನ್ನು ಬಂಧಿಸಲಾಗಿತ್ತು. ಈ ಆರೋಪಿಗೆ ಲಿಖಿಂಪುರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ಪ್ರಕರಣ ಗಂಬೀರವಾಗಿದೆ. ಅಲ್ಲದೇ ತನಿಖೆ ಇನ್ನೂ ಚಾಲ್ತಿಯಲ್ಲಿದ್ದು ಆರೋಪಿಗೆ ಈ ಹಂತದಲ್ಲಿ ಜಾಮೀನು ನೀಡುವುದು ತರವಲ್ಲ ಎಂದು ಸರ್ಕಾರದ ಪರ ವಕೀಲ ಅರವಿಂದ್ ತ್ರಿಪಾಠಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಮಿಶ್ರಾ ಜಾಮೀನು ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದಾರೆ. ಇದರೊಂದಿಗೆ ಪ್ರಕರಣದ ಇನ್ನಿಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನೂ ವಜಾಗೊಳಿಸಲಾಗಿದೆ.

Edited By : Nagaraj Tulugeri
PublicNext

PublicNext

16/11/2021 05:12 pm

Cinque Terre

42.32 K

Cinque Terre

0

ಸಂಬಂಧಿತ ಸುದ್ದಿ