ಹಾವೇರಿ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 13 ಜನರ ಸಾವಿನಿಂದ ಇಡೀ ದೇಶವೇ ಶೋಕತಪ್ತವಾಗಿದೆ. ಆದರೆ ಕೆಲ ವಿಕೃತ ಮನಸ್ಸಿನ ವ್ಯಕ್ತಿಗಳು ಅವರ ಈ ಸಾವನ್ನು ಸಂಭ್ರಮಾಚರಣೆ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇಂತಹ ವಿಕೃತ ಮನಸ್ಸಿನವರ ವಿರುದ್ಧ ಆಕ್ರೋಶವು ವ್ಯಕ್ತವಾಗಿತ್ತು.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಗೆ ಬಂದು ಮತ ಚಲಾಯಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
PublicNext
10/12/2021 12:12 pm