ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಭೇಟಿಯಲ್ಲಿ ಭದ್ರತಾ ಲೋಪ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನವದೆಹಲಿ: ಪಂಜಾಬ್ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರ ಭದ್ರತೆಯಲ್ಲಿ ಬಹುದೊಡ್ಡ ಲೋಪವಾಗಿದೆ. ಈ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಈ ಬಗ್ಗೆ 'ಲಾಯರ್ಸ್ ವಾಯ್ಸ್' ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಯಲಿದೆ. ಮತ್ತೆ ಈ ರೀತಿ ಭದ್ರತಾ ಲೋಪಗಳು ನಡೆಯದಂತೆ ಕ್ರಮಕೈಗೊಳ್ಳಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಪಂಜಾಬ್ ಸರ್ಕಾರದಿಂದ‌ ನಿವೃತ್ತ ನ್ಯಾಯಮೂರ್ತಿ ಮೆಹ್ತಾಬ್ ಸಿಂಗ್ ಗಿಲ್ ನೇತೃತ್ವದ ಸಮಿತಿ ರಚನೆಯಾಗಿದೆ. ಮೂರು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

Edited By : Nagaraj Tulugeri
PublicNext

PublicNext

07/01/2022 07:46 am

Cinque Terre

64.47 K

Cinque Terre

0