ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಮೇಲೆ ಎಫ್ಐಆರ್

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕಾಗಿ ಟೌನ್ ಹಾಲ್ ಮುಂದೆ ಹಾಗೂ ಸುತ್ತಮುತ್ತ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ವಿರುದ್ಧ ಎರಡು ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ನಿಷೇಧಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಆದರೂ ಕಾನೂನು ಬಾಹಿರವಾಗಿ ಫ್ಲೆಕ್ಸ್ ಅಳವಡಿಸಿದ್ದನ್ನು ಕಂಡ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ನೀಡಿದ ದೂರಿನ ಹಿನ್ನೆಲೆ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Edited By : Nagaraj Tulugeri
PublicNext

PublicNext

19/02/2022 08:52 am

Cinque Terre

41.02 K

Cinque Terre

2

ಸಂಬಂಧಿತ ಸುದ್ದಿ