ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್‌ಸಿಪಿ ನಾಯಕ ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏಪ್ರಿಲ್ 4ರವರೆಗೆ ವಿಸ್ತರಣೆ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರರ ಚಟುವಟಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 4ರ ವರೆಗೆ ವಿಸ್ತರಿಸಲಾಗಿದೆ.

ವಿಶೇಷ ಪಿಎಂಎಲ್ಎ ಕೋರ್ಟ್ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 4ರ ವರೆಗೆ ವಿಸ್ತರಿಸಿದ್ದು, ಈ ಅವಧಿಯಲ್ಲಿ ಮಲಿಕ್‌ಗೆ ಬೆಡ್ ಮತ್ತು ಕುರ್ಚಿಯನ್ನು ಒದಗಿಸಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಮನೆ ಊಟಕ್ಕಾಗಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬಾಕಿ ಉಳಿಸಿಕೊಂಡಿದ್ದು, ಮುಂದಿನ ವಿಚಾರಣೆಯ ದಿನಾಂಕದಂದು ಈ ಕುರಿತು ತೀರ್ಮಾನಿಸಲಿದೆ.

Edited By : Nagaraj Tulugeri
PublicNext

PublicNext

22/03/2022 08:00 am

Cinque Terre

44.01 K

Cinque Terre

3

ಸಂಬಂಧಿತ ಸುದ್ದಿ