ನವದೆಹಲಿ: ಪಶ್ಚಿಮ ಬಂಗಾಳದ ಭಿರ್ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೆ 10 ಮಂದಿ ಮೃತಪಟ್ಟಿದ್ದು ಕೆಲವರು ಗಾಯಗೊಂಡಿದ್ದಾರೆ. ಈ ಹಿಂಸಾಚಾರದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಹಿಂಸಾಚರಕ್ಕೆ ಪ್ರಚೋದನೆ ನೀಡಿದವರು ಹಾಗೂ ಪಾಲ್ಗೊಂಡವರನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಿ, ಪ್ರಕರಣದಲ್ಲಿ ತಪ್ಪಿತಸ್ಥರನ್ನ ಬಂಧಿಸಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. 'ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ. ಇಂತಹ ಘಟನೆಗಳನ್ನ ಪ್ರಚೋದಿಸುವವರನ್ನ ಎಂದೂ ಕ್ಷಮಿಸಲಾಗದು' ಎಂದಿದ್ದಾರೆ.
ಬಿರ್ಭುಮ್ ಜಿಲ್ಲೆಯ ರಾಂಪುರ್ ಹತ್‌ನಲ್ಲಿ ಕೆಲ ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು. ಈ ಪ್ರಕರಣ ದಿನೇ ದಿನೇ ರಾಜಕೀಯಕ್ಕೆ ತಿರುಗಿದ್ದು ಬಿಜೆಪಿ ಮತ್ತು ಟಿಎಂಸಿ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ.
PublicNext
24/03/2022 07:34 am