ನವದೆಹಲಿ ; ಒಂದು ವೇಳೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದ್ರೆ 20 ವರ್ಷದೊಳಗೆ ಶೆ.50 ರಷ್ಟು ಹಿಂದೂಗಳ ಮತಾಂತರವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟು ವಿವಾದಿತ ಧಾರ್ಮಿಕ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಕೇಸ್ ದಾಖಲಾಗಿದೆ.
ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಯತಿ ನರಸಿಂಹಾನಂದ ಸರಸ್ವತಿ ಸೇರಿದಂತೆ ಹಿಂದೂ ಮಹಾಪಂಚಾಯತ್ ನ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188/153 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ದೆಹಲಿಯಲ್ಲಿ ನಡೆದ ಹಿಂದೂ ಮಹಾಪಂಚಾಯತ್ ನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
PublicNext
04/04/2022 07:33 pm