ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ವ್ಯಕ್ತಿಗೆ ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನ್ಯಾಯಾಲಯದಿಂದ ಈ ತೀರ್ಪು ಪ್ರಕಟವಾಗಿದೆ.
ತಾಲೂಕಿನ ಬೆಳ್ಳಾರೆ ನಿವಾಸಿ ಗಿರಿಧರ್ ರೈ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಸುಳ್ಯ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್ ಅವರು ಗಿರಿಧರ್ ರೈಗೆ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
2016ರಲ್ಲಿ ಡಿ.ಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ತೀರ್ಪು ನೀಡಲಾಗಿದೆ. ಗಿರಿಧರ್ ರೈ ಅವರು 2016ರ ಫೆ.28ರಂದು ಆಗಿನ ಇಂಧನ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಿರಿಧರ್ ಅವರು ಡಿಕೆ ಶಿವಕುಮಾರ್ ಅವರನ್ನು ನಿಂದಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಡಿ.ಕೆ ಶಿವಕುಮಾರ್ ಅವರು ಮೆಸ್ಕಾಂ ಎಂ.ಡಿ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
PublicNext
19/04/2022 01:54 pm