ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ನಡುವೆ ನರೇಂದ್ರ ಮೋದಿ ರ್‍ಯಾಲಿ ನಡೆಯಲಿರುವ ಸ್ಥಳದಿಂದ ಕೇವಲ 12 ಕಿ.ಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ.
ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ಆರಂಭಿಸಿದ್ದಾರೆ. 'ಇದು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ತೋರುತ್ತಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
PublicNext
24/04/2022 03:31 pm