ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ಅವರಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಅಧಿಕಾರಿಗಳಿಂದ ದೊರೆತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ, ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.
ಕಳೆದ ಮಾರ್ಚ್ 30ರಂದು ಬಿಜೆಪಿ ಕಾರ್ಯಕರ್ತರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಸಂಸದ ತೇಜಸ್ವಿ ಸೂರ್ಯ ಕೂಡ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೆಲ ಕಾರ್ಯಕರ್ತರು ಕೇಜ್ರಿವಾಲ್ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಒಟ್ಟು 26 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
PublicNext
26/04/2022 07:27 pm