ಮುಂಬೈ: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವಾಬ್ ಮಲಿಕ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವೈದ್ಯಕೀಯ ಕಾರಣಗಳಿಗಾಗಿ ನವಾಬ್ ಮಲಿಕ್ ತಾತ್ಕಾಲಿಕ ಜಾಮೀನು ನೀಡಲು ಮುಂಬೈ ವಿಶೇಷ ನ್ಯಾಯಾಲಯವು ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದುಕೊಂಡೇ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿಸಲಾಗಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಫೆಬ್ರುವರಿ 23ರಂದು ನವಾಬ್ ಮಲಿಕ್ ಅವರನ್ನು ಬಂಧಿಸಿದ್ದರು.
PublicNext
13/05/2022 08:09 pm