ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಡಿಯೋ: ಪೊಲೀಸರ ಮುಖಕ್ಕೆ ಉಗುಳಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

ನವದೆಹಲಿ: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿ'ಸೋಜ ಅವರು ಮಹಿಳಾ ಪೊಲೀಸರ ಮುಖದ ಮೇಲೆ ಉಗುಳಿದ್ದಾರೆ. ಈ ದೃಶ್ಯ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರನ್ನು ನಿರಂತರ ವಿಚಾರಣೆಗೆ ಒಳಪಡಿಸಿದೆ. ಇದನ್ನು ಖಂಡಿಸಿ ಕಾಂಗ್ರೆಸ್‌ನ ಹಲವಾರು ಮುಂದಳ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದರಂತೆ ಇಂದು ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅರೆಸ್ಟ್ ಮಾಡಲು ಮುಂದಾಗಿದ್ದಾರೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿ'ಸೋಜ ಅವರನ್ನು ಪೊಲೀಸರು ಬಂಧಿಸಿ ಪೊಲೀಸ್‌ ಬಸ್‌ನಲ್ಲಿ ಹತ್ತಿಸಿದ್ದಾರೆ. ಈ ವೇಳೆ ಕುಪಿತಗೊಂಡ ನೆಟ್ಟಾ ಮಹಿಳಾ ಪೊಲೀಸರ ಮೇಲೆ ತಪುಕ್ ಎಂದು ಉಗುಳಿದ್ದಾರೆ.

Edited By : Nagaraj Tulugeri
PublicNext

PublicNext

21/06/2022 07:23 pm

Cinque Terre

88.69 K

Cinque Terre

31

ಸಂಬಂಧಿತ ಸುದ್ದಿ