ನವದೆಹಲಿ: ಧಾರ್ಮಿಕ ದ್ವೇಷ ಹುಟ್ಟುಹಾಕಿದ ಆರೋಪದ ಮೇಲೆ ಪತ್ರಕರ್ತ ಮತ್ತು ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ‘ಆಲ್ಟ್ ನ್ಯೂಸ್’ ಸಂಸ್ಥಾಪಕರಲ್ಲಿ ಒಬ್ಬರಾದ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿ ಕಸ್ಟಡಿಗೆ ಒಪ್ಪಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಅವರು ಹಂಚಿಕೊಂಡ ಟ್ವೀಟ್ ಆಕ್ರೋಶಕ್ಕೆ ಗುರಿಯಾಗಿತ್ತು.
ಈ ಟ್ವೀಟ್ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು ದ್ವೇಷವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬಂಧನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠರಾದ ಶಶಿತರೂರ್ ಮತ್ತು ಜೈರಾಮ್ ರಮೇಶ್ ಮತ್ತು ಮಜ್ಲಿಸ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. ವಕೀಲ ಮತ್ತು ಹೋರಾಟಗಾರ ಪ್ರಶಾಂತ್ ಭೂಷಣ್ ಕೂಡ ಈ ಸಂಬಂಧವನ್ನು ದೂಷಿಸಿದ್ದಾರೆ. ಜುಬೇರ್ ಅವರ ಸಹೋದ್ಯೋಗಿ ಮತ್ತು ಆಲ್ಟ್ ನ್ಯೂಸ್‌ನ ಇನ್ನೊಬ್ಬ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.
PublicNext
29/06/2022 07:44 am