ಬೆಂಗಳೂರು: ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲ ಬಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪೌಲ್‌ಗೆ ಈ ಹಗರಣದಲ್ಲಿ ಭಾಗಿಯಾದ ಸಚಿವರ ಹೆಸರು ಗೊತ್ತಿದೆ. ಆದ್ರೆ ತನಿಖಾಧಿಕಾರಿಗಳು ಈ ಹೆಸರನ್ನು ಅವರಿಂದ ದಾಖಲಿಸಿಕೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಹೈಕೋರ್ಟ್ ನ್ಯಾಯಾಧೀಶರು ಏನು ಹೇಳಿದ್ದಾರೆ? ಎಂದು ಎಲ್ಲರೂ ನೋಡಿದ್ದಾರೆ. ಪಿಎಸ್ಐ ಹಗರಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ" ಎಂದರು. "ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಇದುವರೆಗೂ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರ ರಾಜಧಾನಿಯಾಗಿದೆ ಎಂದು ಟೀಕಿಸಿದ್ದಾರೆ.
PublicNext
07/07/2022 10:51 pm