ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ವಿಟ್ಟರ್‌ನಲ್ಲಿ ಅಮಿತ್ ಶಾ ಫೋಟೋ ಹಂಚಿಕೊಂಡ ನಿರ್ಮಾಪಕ ಬಂಧನ

ಅಹ್ಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಆರೋಪದ ಅಡಿ ಚಲನಚಿತ್ರ ನಿರ್ಮಾಪಕ ಅವಿನಾಶ್ ದಾಸ್ ಅವರನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿರ್ಮಾಪಕ ಅವಿನಾಶ್ ಅವರು ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿರುವ ಗುಜರಾತ್ ಪೊಲೀಸರು ಮುಂದಿನ ಕ್ರಮಕ್ಕಾಗಿ ಅವರನ್ನು ಅಹಮದಾಬಾದ್‌ಗೆ ಕರೆತರಲಾಗುತ್ತಿದೆ. ಈ ಬಗ್ಗೆ ಅಹಮದಾಬಾದ್‌ ನಗರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಡಿ.ಪಿ ಚುಡಾಸಮಾ ತಿಳಿಸಿದ್ದಾರೆ. ಅಹ್ಮದಾಬಾದ್ ಅಪರಾಧ ವಿಭಾಗವು ಮುಂಬೈ ಮೂಲದ ಚಲನಚಿತ್ರ ನಿರ್ಮಾಪಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 469ರ ಅಡಿ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರು ತಮ್ಮ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ರಾಷ್ಟ್ರಧ್ವಜವನ್ನು ಧರಿಸಿದ ಮಹಿಳೆಯ ಮತ್ತೊಂದು ಫೋಟೋವನ್ನು ಇದಕ್ಕೂ ಮುನ್ನ ಪೋಸ್ಟ್ ಮಾಡಿದ್ದರು.

Edited By : Nagaraj Tulugeri
PublicNext

PublicNext

19/07/2022 06:51 pm

Cinque Terre

55.61 K

Cinque Terre

0

ಸಂಬಂಧಿತ ಸುದ್ದಿ