ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಂಬಂಧ ಕೋಟ್ಯಾಂತರ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಗುರುವಾರ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗಿದ್ದಾರೆ.
ಇದಕ್ಕೂ ಮುನ್ನ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗೆ ಸೋನಿಯಾಗೆ ನೋಟಿಸ್ ನೀಡಿದ್ದರು. ನೋಟಿಸ್ ಬಂದ ಕೂಡಲೇ ಕೊರೊನಾ ಸೋಂಕು ತಗುಲಿದೆ ಎಂದು ಹೇಳಿದ್ದ ಸೋನಿಯಾ ಆಸ್ಪತ್ರೆಗೆ ದಾಖಲಾಗಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ನಂತರ ಮತ್ತೊಮ್ಮೆ ಇ.ಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆಗಲೂ ಸೋನಿಯಾ ಗಾಂಧಿ ಅವರಿಗೆ ಶ್ವಾಸನಾಳ ಸೋಂಕು ಉಂಟಾಗಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಜೂನ್ ಮಧ್ಯಂತರ ಅವಧಿಯಲ್ಲಿ ಡಿಸ್ಚಾರ್ಜ್ ಆಗಿದ್ದ ಸೋನಿಯಾ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದರು.
ಈ ಎಲ್ಲ ಬೆಳವಣಿಗೆಗಳ ನಂತರ ಇಂದು ಗುರುವಾರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.
PublicNext
21/07/2022 03:11 pm