ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಿಎಂ ಖಂಡನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಿನ್ನೆ ಮಂಗಳವಾರ ರಾತ್ರಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈಯಲಾಗಿದೆ.

ಈ ಹತ್ಯೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ‌. ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ‌.

ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಕೊಲೆ ಕೃತ್ಯ ಅತ್ಯಂತ ಖಂದನೀಯ. ಇಂಥ ಹೇಯ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಶ್ರೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಜರುಗಿಸುತ್ತೇವೆ. ಈ ನೋವು ಭರಿಸುವ ಶಕ್ತಿ ಪ್ರವೀಣ್ ಕುಟುಂಬಕ್ಕೆ ಸಿಗಲಿ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

27/07/2022 07:45 am

Cinque Terre

46.46 K

Cinque Terre

3

ಸಂಬಂಧಿತ ಸುದ್ದಿ