ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫಾರ್ಮ್ ಹೌಸ್‌ನಲ್ಲಿ ವೇಶ್ಯಾವಾಟಿಕೆ: ಮೇಘಾಲಯದ ಬಿಜೆಪಿ ಮುಖಂಡ ಬಂಧನ

ಲಕ್ನೋ: ಫಾರ್ಮ್‌ಹೌಸ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಮೇಘಾಲಯದ ಬಿಜೆಪಿ ಉಪಾಧ್ಯಕ್ಷ ಬೆರ್ನಾಡ್ ಎನ್ ಮರಕ್ ಎಂಬಾತರನ್ನು ಪೊಲೀಸರು ಬಂದಿಸಿದ್ದಾರೆ.

ಕಳೆದ ಶನಿವಾರ ಪೊಲೀಸರು ನಡೆಸಿದ ದಾಳಿಯಲ್ಲಿ ಮರಕ್ ಅವರ ಫಾರ್ಮ್‌ಹೌಸ್‌ನಿಂದ 6 ಅಪ್ರಾಪ್ತರನ್ನು ರಕ್ಷಿಸಿ, 73 ಜನರನ್ನು ಬಂಧಿಸಲಾಗಿತ್ತು. ಪೊಲೀಸ್ ದಾಳಿ ಬಗ್ಗೆ ಗೊತ್ತಾದ ಕೂಡಲೇ ಮರಕ್ ಪರಾರಿಯಾಗಿದ್ದರು. ತನಿಖೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಆದರೂ ಮರಕ್ ತಲೆಮರೆಸಿಕೊಂಡಿದ್ದರು. ಹೀಗಾಗಿ ಸೋಮವಾರ ತುರಾ ನ್ಯಾಯಾಲಯ ಮರಕ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಕೋರ್ಟ್ ವಾರಂಟ್ ಪಡೆದು ಹುಡುಕಾಡಿದ ಪೊಲೀಸರು ಬೆರ್ನಾಡ್ ಎನ್ ಮರಕ್ ಅವರನ್ನು ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಮರಕ್‌ನನ್ನು ಬಂಧಿಸಿರುವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

Edited By : Nagaraj Tulugeri
PublicNext

PublicNext

27/07/2022 08:33 am

Cinque Terre

119.81 K

Cinque Terre

13

ಸಂಬಂಧಿತ ಸುದ್ದಿ