ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾ ನಗರದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಬಿಜೆಪಿ ಮುಖಂಡ ಹಲ್ಲೆ ನಡೆಸಿರುವ ವಿಡಿಯೋ ಮಾಧ್ಯಮಗಳಿಗೆ ದೊರೆತಿದೆ. ಈ ಬಗ್ಗೆ ವರದಿಯಾಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆರೋಪಿ ಮೇಲೆ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಪೊಲೀಸರಿಗೆ ಮನವಿ ಮಾಡಿದೆ.
ನೋಯ್ಡಾದ ಬಿಜೆಪಿ ನಾಯಕ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿ ಸೆಕ್ಟರ್ 93ಬಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದಾರೆ. ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ತ್ಯಾಗಿ ಅವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಶ್ರೀಕಾಂತ್ ತ್ಯಾಗಿ ಏರುಧ್ವನಿಯಲ್ಲಿ ಮಾತನಾಡಿ ಅವಾವ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಾಗೂ ಆಕೆಯ ಮೇಲೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ಕಾಣುತ್ತಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಹೆಚ್ಚುವರಿ ಪೊಲೀಸ್ ಉಪ ಆಯುಕ್ತೆ (ಮಹಿಳಾ ಸುರಕ್ಷತೆ) ಅಂಕಿತಾ ಶರ್ಮಾ, ಸೆಕ್ಷನ್ 354ರ ಅಡಿ ಶ್ರೀಕಾಂತ್ ತ್ಯಾಗಿ ಮೇಲೆ ಕೇಸ್ ದಾಖಲಿಸಲಾಗಿದೆ. ತನಿಖೆ ನಡೆದ ನಂತರ ಮತ್ತಷ್ಟು ಆರೋಪಗಳನ್ನು ಸೇರಿಸುವ ಸಾಧ್ಯತೆ ಇದೆ. ಕೇಸ್ ದಾಖಲಾದ ಮೇಲೆ ಆರೋಪಿ ಶ್ರೀಕಾಂತ್ ತ್ಯಾಗಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.
PublicNext
06/08/2022 07:37 pm