ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡಿಕೆ ಬ್ರದರ್ಸ್‌ಗೆ ಮತ್ತೆ ಸಂಕಷ್ಟ; ನಾಳೆ ವಿಚಾರಣೆಗೆ ಹಾಜರಾಗಿ ಎಂದ ಇ.ಡಿ

ಬೆಂಗಳೂರು: ತಮ್ಮ ಕಚೇರಿ ಮುಂದೆ ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಈ ಮೊದಲು ದಿನಾಂಕ ಸೆ.23 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.

ಆದರೆ ಅದಕ್ಕೆ ನಿರಾಕರಿಸಿರುವ ಇಡಿ ಅ. 7 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಅ 5 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

06/10/2022 04:47 pm

Cinque Terre

81.6 K

Cinque Terre

5

ಸಂಬಂಧಿತ ಸುದ್ದಿ