ಮಂಡ್ಯದ ಪ್ರತಿಷ್ಠಿತ ಚಿನ್ನದ ವ್ಯಾಪಾರಿ, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರು ತಿಂಗಳ ಹಿಂದೆ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಆರೋಪಿತೆ ಸಲ್ಮಾ ಭಾನುವನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಸದ್ಯ ಹೆಚ್ಚಿನ ವಿಚಾರನೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಈಕೆ ಡ್ರಾಪ್ ನೀಡುವ ನೆಪದಲ್ಲಿ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ಎನ್ನುವವರನ್ನು ಅಪಹರಣ ಮಾಡಿ, ಲಾಡ್ಜ್ಗೆ ಕರೆದುಕೊಂಡು ಹೋಗಿ ಯುವತಿಯನ್ನು ಬಿಟ್ಟು ವಿಡಿಯೋ ಚಿತ್ರೀಕರಣ ಮಾಡಿ 50 ಲಕ್ಷ ರೂಪಾಯಿ ವಸೂಲಿ ಮಾಡಿರುವ ಘಟನೆ ಇದಾಗಿದೆ. ಇಂತಹ ಜಾಲದಲ್ಲಿ ಅನೇಕರು ಸಿಲುಕಿಸಿರುವ ಶಂಕೆ ಹಿನ್ನೆಲೆ ಆರೋಪಿ ಸಲ್ಮಾಭಾನು ವಿಚಾರಣೆ ಚುರುಕುಗೊಂಡಿದೆ. ಆಕೆಗೆ ಸಹಕಾರ ಕೊಟ್ಟವರು, ವಿಡಿಯೋ ರೆಕಾರ್ಡ್ ಮಾಡಿದವರು, ಹಣ ಪೀಕಿದವರು ಯಾರ್ಯಾರೆಂದು ಪೊಲೀಸರು ವಿಚಾರಣೆ ಮಾಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್ ಮಾಲೀಕರಾಗಿದ್ದಾರೆ. ಅವರು ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು.
ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಭಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.
PublicNext
22/08/2022 05:25 pm