ಮಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದೆ. ಸರ್ಕಾರ ಜಾರಿ ಮಾಡಿರುವ ಈ ಸಮವಸ್ತ್ರ ನೀತಿಯನ್ನು ಕರ್ನಾಟಕ ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಸಮರ್ಥಿಸಿಕೊಂಡಿದ್ದಾರೆ. ಇದಾದ ಬಳಿಕ ರಹೀಂ ಉಚ್ಚಿಲ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಮಾಧ್ಯಮ ಚರ್ಚೆ ವೇಳೆ ರಹೀಂ ಉಚ್ಚಿಲ್ ಅವರು ಸರಕಾರದ ನಿಲುವನ್ನು ಬೆಂಬಲಿಸಿದ್ದರು. ಈ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಫೆ.4ರಂದು ಮಧಾಹ್ನ 2.56 ಕ್ಕೆ ರಹೀಂ ಉಚ್ಚಿಲರಿಗೆ ಕರೆ ಮಾಡಿ, ಉಚ್ಚಿಲ್ ಹಾಗೂ ಕುಟುಂಬವನ್ನು ನಿಂದಿಸಿ ಜೀವಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಹೀಂ ಉಚ್ಚಿಲ್, ಈ ಬಗ್ಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ, ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ರಹೀಂ ಉಚ್ಚಿಲ್ ಮೇಲೆ ಈ ಹಿಂದೆ ಮಾರಣಾಂತಿಕ ಹಲ್ಲೆ ನಡೆದಿತ್ತು.
PublicNext
06/02/2022 08:15 am