ನವದೆಹಲಿ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಗಲ್ಲಿಗೇರಿಸುವಂತೆ ಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಆಗ್ರಹಿಸಿದ್ದಾರೆ. ಈ ಹೇಳಿಕೆಗೆ ಓವೈಸಿ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ನೂಪುರ್ ಶರ್ಮಾರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ನೂಪುರ್ ಶರ್ಮಾರನ್ನು ಬಂಧಿಸಬೇಕು. ಇದು ನಮ್ಮ ಪಕ್ಷದ ನಿಲುವೂ ಆಗಿದೆ ಎಂದು ಅಸಾದುದ್ದೀನ್ ಓವೈಸಿ ಆಗ್ರಹಿಸಿದ್ದಾರೆ.
ನೂಪುರ್ ಶರ್ಮಾರನ್ನು ಬಹಳ ದಿನ ಕಳೆದರೂ ಬಂಧಿಸಿಲ್ಲ. ಏಕೆ ಆಕೆಯನ್ನು ಬಂಧಿಸುತ್ತಿಲ್ಲ? ಏಕೆ ಕಾನೂನು ಕ್ರಮ ತೆಗೆದುಕೊಳ್ಳುತ್ತಿಲ್ಲ? ಯಾರು ನಿಮ್ಮನ್ನು ತಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
PublicNext
12/06/2022 06:07 pm