ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರೈಲಿಗೆ ತಲೆ ಕೊಟ್ಟು ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ..!

ಚಿಕ್ಕಮಗಳೂರು: ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಪ್ತರಾಗಿದ್ದ ಎಸ್.‌ಎಲ್‌ ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಕಾರ್‌ನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಗನ್‌ಮ್ಯಾನ್‌, ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಅನೇಕ ಕಡೆಗಳಲ್ಲಿ ಹುಡುಕಾಡಿದ ನಂತರ ಕೊನೆಗೆ ಅವರ ಮೃತದೇಹ ಕಡೂರು ತಾಲೂಕಿನ ಗುಣಸಾಗರದ ಮಂಕೇನಹಳ್ಳಿ ರೈಲ್ವೇ ಟ್ರ್ಯಾಕ್‌ ಬಳಿ ಪತ್ತೆಯಾಗಿದೆ.

ಸಂಜೆ ಸುಮಾರು 6.30ರ ಹೊತ್ತಿಗೆ ತಮ್ಮ ಕಾರು ಚಾಲಕನ ಜೊತೆ ಸಖರಾಯಪಟ್ಟಣದ ಮನೆಯಿಂದ ಗುಣಸಾಗರಕ್ಕೆ ಧರ್ಮೇಗೌಡ ಬಂದಿದ್ದರು. ನಂತರ ಪಕ್ಕದ ರೈಲ್ವೆ ಟ್ರ್ಯಾಕ್‌ ಬಳಿ ಕಾರು ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ್ದಾರೆ. ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕಿದೆ. ನೀನು ಹೋಗು ಅಂತಾ ಕಾರು ಚಾಲಕನನ್ನು ಅಲ್ಲಿಂದ ಕಳುಹಿಸಿದ್ದಾರೆ. ಸ್ಥಳದಿಂದಲೇ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ಕೇಳಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ ಎಂಬ ಮಾಹಿತಿ ಇದೆ.

ತಮ್ಮ ಹಳೆಯ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡ ರಾತ್ರಿ ಸುಮಾರು 11ರಿಂದ 12 ಗಂಟೆ ಸುಮಾರಿಗೆ ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧರ್ಮೇಗೌಡ ಸಹೋದರ, ಸಿ.ಟಿ ರವಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹಾಗೂ ಇತರರು ಭೇಟಿ ನೀಡಿದ್ದಾರೆ.

ಇತ್ತೀಚೆಗೆ ವಿಧಾಣ ಪರಿಷತ್ ನಲ್ಲಿ ನಡೆದ ಗದ್ದಲ-ಗಲಾಟೆಯಿಂದ ಧರ್ಮೇಗೌಡ ಮಾನಸಿಕವಾಗಿ ಜರ್ಜರಿತರಾಗಿದ್ದರು ಎನ್ನಲಾಗಿದೆ.

Edited By : PublicNext Desk
PublicNext

PublicNext

29/12/2020 06:53 am

Cinque Terre

127.36 K

Cinque Terre

15

ಸಂಬಂಧಿತ ಸುದ್ದಿ