ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕ ಸಂಸತ್ ಕಟ್ಟಡಕ್ಕೆ ಬೆಂಕಿ: ನಾಲ್ವರು ಬಲಿ: ಮುಂದುವರೆದ ಪುಂಡಾಟಿಕೆ

ವಾಷಿಂಗ್ಟನ್: ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಪರ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದೆ. ಗಲಭೆಯಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಬಲಿಯಾಗಿದ್ದಾರೆ. ಕಟ್ಟಡದ ರಕ್ಷಣೆಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ಕಿತ್ತೆಸೆದ ಟ್ರಂಪ್ ಬೆಂಬಲಿಗರು ಒಳನುಗ್ಗಿ ದಾಂಧಲೆ ಮಾಡಿದ್ದಾರೆ. ಗಲಭೆ ನಿಯಂತ್ರಿಸಲು ಅಮೆರಿಕದಾದ್ಯಂತ 15 ದಿನಗಳ ಕಾಲ ತುರ್ತು ಪರಿಸ್ಥಿತಿ ಜಾರಿಗೊಳಿಸಲಾಗಿದೆ.

ಕ್ಯಾಪಿಟಲ್ ಕಟ್ಟಡದಲ್ಲಿ ದಾಂಧಲೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಗಲಭೆಕೋರರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. ಇದಕ್ಕೆ‌ ಪ್ರತಿಯಾಗಿ ಕಟ್ಟಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕೂಡಲೇ ಪೊಲೀಸರ್ ಗುಂಡಿನ ದಾಳಿ ನಡೆಸಿದ್ದಾರೆ.

ಇದುವರೆಗೆ ಒಟ್ಟು 52 ಜನರನ್ನು ಶಾಂತಿ ಕದಡಿದ ಕಾರಣಕ್ಕಾಗಿ ಅರೆಸ್ಟ್ ಮಾಡಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವಾರು ನಾಯಕರು ಈ ಕೃತ್ಯವನ್ನು ಖಂಡಿಸಿದ್ದಾರೆ.

Edited By : Nagaraj Tulugeri
PublicNext

PublicNext

07/01/2021 04:09 pm

Cinque Terre

111.87 K

Cinque Terre

6

ಸಂಬಂಧಿತ ಸುದ್ದಿ