ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಾಮಲೈಗೆ ವೈ ಪ್ಲಸ್ ಭದ್ರತೆ

ಚೆನ್ನೈ: ದಕ್ಷ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ರಾಜಕೀಯ ಕಾರ್ಯಗಳಲ್ಲಿ ಸಕ್ಕತ್ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್ ಅಧಿಕಾರಿ ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಅವರಿಗೆ ಸಾಕಷ್ಟು ಕರೆಗಳು ಬಂದ ಕಾರಣ ಭದ್ರತೆ ಹೆಚ್ಚಿಸಲಾಗಿದ್ದು, ಇದೀಗ ವೈ ಪ್ಲಸ್ ಭದ್ರತೆ ನೀಡಲಾಗಿದೆ. ಕೆಲವು ತಿಂಗಳಿನಿಂದ ನನಗೆ ಬೆದರಿಕೆ ಕರೆಗಳು ಬರುತ್ತಿದೆ. ಈ ಹಿನ್ನಲೆ ಭದ್ರತೆಯನ್ನು ಪೊಲೀಸರು ನೀಡಿದ್ದಾರೆ ಅಣ್ಣಾ ಮಲೈ ತಿಳಿಸಿದ್ದಾರೆ.

ಕೆಲ ಮಾವೋವಾದಿ ಮತ್ತು ಪಿಎಫ್ ಐ ಗುಂಪುಗಳಿಂದ ಬೆದರಿಕೆ ಬರುತ್ತಿರುವುದಾಗಿ ತಿಳಿದುಬಂದಿದೆ. ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಸದ್ಯ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್ ಮ್ಯಾನ್ ಇರಲಿದ್ದು, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ. 10 ವರ್ಷಗಳ ಸೇವೆ ಬಳಿಕ ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

04/02/2021 07:11 pm

Cinque Terre

119.76 K

Cinque Terre

2