ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋಲು ಕಂಡ ವ್ಯಕ್ತಿಯೊಬ್ಬ ಗೆದ್ದ ಮಹಿಳೆ ಮಗನನ್ನೇ ಕೊಲೆಗೈದ ಆಘಾತಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದ ಶರಣಬಸವ (28) ಕೊಲೆಯಾದ ಯುವಕ. ಜಗದೀಶ್ ಕೊಲೆಗೈದ ಆರೋಪಿ. ಗುಡದನಾಳ ಗ್ರಾಮದಲ್ಲಿ ಸೋಮವಾರಾ ರಾತ್ರಿ ಎರಡು ಗುಂಪುಗಳ ನಡುವೆ ಜಗಳವಾಗಿತ್ತು. ಜಗದೀಶ್‌ನಿಂದ ಶರಣಬಸವನ ಮೇಲೆ ಮಾರಣಾಂತಿಕ ಹಲ್ಲೆ ನಡೆದು ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗ ಮಧ್ಯೆ ಯುವಕ ಸಾವನ್ನಪ್ಪಿದ್ದಾನೆ.
ಈ ಘಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಹನುಮಂತಮ್ಮ, ಅಮರೇಶ ಗಾಯಗೊಂಡಿದ್ದು, ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಜಗದೀಶ್ ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
PublicNext
16/02/2021 04:46 pm