ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಚಿವ ಜಾಕೀರ್ ಹೊಸೈನ್ ಹಾಗೂ ಅವರೊಂದಿಗೆ ಇದ್ದವರ ಮೇಲೆ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದೆ.
ದಾಳಿಯಲ್ಲಿ ಸಚಿವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅಷ್ಟೇ ಅಲ್ಲದೆ ಸಚಿವರ ಜೊತೆಗಿದ್ದ ಇಬ್ಬರು ಗಾಯಗೊಂಡಿದ್ದು, ಎಲ್ಲರಿಗೂ ಜಂಗೀಪುರ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಒದಗಿಸಲಾಗುತ್ತಿದೆ. ಸಚಿವರಿಗೆ ಕಾಲು ಹಾಗೂ ಕಿಬೊಟ್ಟೆಗೆ ಗಾಯವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಕೋಲ್ಕತ್ತಾಗೆ ಸ್ಥಳಾಂತರಿಸಲಾಗುತ್ತಿದೆ.
ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆಯ ಕಾವು ಏರುತ್ತಿರುವಾಗಲೇ ಅಹಿತಕರ ಘಟನೆ ನಡೆದಿದೆ. ಬಾಂಬ್ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
PublicNext
18/02/2021 07:44 am