ಬ್ರಹ್ಮಾಪುರ (ಪ.ಬಂಗಾಳ) : ಪಶ್ಚಿಮ ಬಂಗಾಳ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ ನಡೆದಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಚಿವ ಜಾಕೀರ್ ಹೊಸೈನ್ ಮೇಲೆ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದ್ದು, ಸಚಿವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್ ಶಾಸಕರ ಜೊತೆಗಿದ್ದ ಇನ್ನಿತರ ಇಬ್ಬರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆಯ ಕಾವು ಏರುತ್ತಿರುವಾಗಲೇ ಅಹಿತಕರ ಘಟನೆ ನಡೆದಿದೆ.ಟಿಎಂಸಿ ಹಿರಿಯ ನಾಯಕ ಮಲಯ್ ಘಾತಕ್ ಪ್ರಕಾರ, ಪಕ್ಷದ ರಾಜಕೀಯ ವೈರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಕೋಲ್ಕತ್ತಾಗೆ ರೈಲು ಹತ್ತಲು ನಿಲ್ದಾಣದಲ್ಲಿ ಕಾಯುತ್ತಿದ್ದ ಕಾರ್ಮಿಕ ಸಚಿವ ಹೊಸೈನ್ ಮೇಲೆ ದಾಳಿ ನಡೆದಿದೆ ಎಂದು ಬಂಗಾಳ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
18/02/2021 01:06 pm