ಮುಂಬೈ: ಟಿಕ್ ಟಾಕ್ ಸ್ಟಾರ್ ಪೂಜಾ ಚವಾಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಮೊದಲ ತಲೆದಂಡವಾಗಿದ್ದು, ಸಚಿವ ಸ್ಥಾನಕ್ಕೆ ಸಂಜಯ್ ರಾಥೋಡ್ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚವಾಣ್ (23) ಆತ್ಮಹತ್ಯೆ ಪ್ರಕರಣದಲ್ಲಿ ಶಿವಸೇನೆ ಮುಖಂಡ, ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೇ ಸಂಜಯ್ ರಾಥೋಡ್ ಅವರು ಇಂದು ಪತ್ನಿ ಸಮೇತರಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ''ಯುವತಿಯೊಬ್ಬಳ ಸಾವಿನ ಹಿಂದೆ ನನ್ನ ಕೈವಾಡವಿದೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದಾಗಿ ನಾನು ಈ ಹುದ್ದೆಯಲ್ಲಿ ಮುಂದುವರಿಯಲು ಬಯಸುತ್ತಿಲ್ಲ. ನನ್ನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸಲ್ಲಿಸಿದ್ದೇನೆ. ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಿ ನಿಜಾಂಶ ಹೊರಬರಲಿ'' ಎಂದು ತಿಳಿಸಿದ್ದಾರೆ.
PublicNext
28/02/2021 07:34 pm