ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹೊಸ ಸಚಿವ ಸಂಪುಟ ಇಂದು ರಚನೆಯಾಗಿದೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್‌ವೈ ಸರ್ಕಾರದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿದ್ದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಎಸ್‌ವೈ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆಯವರು ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿ ಟೆಂಟರ್‌ನಲ್ಲಿ ಅವ್ಯವಹಾರ ನಡೆಸಿದ್ದಾರೆ. ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆದಿದ್ದಾರೆ ಎಂದು ಖಾಸಗೀ ಸುದ್ದಿ ವಾಹಿನಿಯೊಂದು ಸ್ಟಿಂಗ್ ಆಪರೇಷನ್ ಮೂಲಕ ಹಗರಣವನ್ನು ಬಹಿರಂಗ ಪಡಿಸಿ ಸುಧೀರ್ಘ ವರದಿ ಬಿತ್ತರಿಸಿತ್ತು.
PublicNext
04/08/2021 03:36 pm