ಬೆಂಗಳೂರು: ನಗರದಲ್ಲಿ ಬೀಡು ಬಿಟ್ಟಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವರುಗಳಾದ ರೋಷನ್ ಬೇಗ್ ಹಾಗೂ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ಮಾಡಿ ಸತತ ವಿಚಾರಣೆ ನಡೆಸುತ್ತಿದ್ದಾರೆ.
ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡಿದ್ದರು. 2.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು 5 ಕೋಟಿ ರೂ.ಗೆ ಮಾರಿದ್ದರು. ಈ ವ್ಯವಹಾರ ಜಮೀರ್ ಗೆ ಕಂಟಕವಾಗುವ ಸಾಧ್ಯತೆ ಇದೆ. ಮತ್ತು ಇದೇ ವಿಚಾರವಾಗಿ ಈ ಹಿಂದೆ ಜಮೀರ್ ಅಹ್ಮದ್ ಎಸ್ಐಟಿ ಹಾಗೂ ಸಿಬಿಐ ವಿಚಾರಣೆ ಎದುರಿಸಿದ್ದರು. ಇಂದಿನ ಈ ಎಲ್ಲ ಬೆಳವಣಿಗೆ ಬಗ್ಗೆ ಮದ್ಯಾಹ್ನ 12ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾಗೋಷ್ಟಿ ಕರೆದಿದ್ದಾರೆ.
PublicNext
05/08/2021 11:34 am