ಬೆಂಗಳೂರು: ಸದ್ಯ ಇ.ಡಿ ತನಿಖೆ ಎದುರಿಸುತ್ತಿರುವ ಶಾಸಕ ಜಮೀರ್ ಅಹ್ಮದ್, ವಿವಾದಿತ ಐಎಂಎ ಕಂಪನಿಯಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ತಮ್ಮ ಪುತ್ರಿಯ ಮದುವೆಯ ಸಂದರ್ಭದಲ್ಲಿ ಜಮೀರ್ ಅವರು ಮನ್ಸೂರ್ ಬಳಿ 9 ಕೋಟಿ ಹಣ ಪಡೆದಿದ್ದಾರೆ. ಉಳಿದಿದ್ದ ಹಣವನ್ನು ಚಿನ್ನದ ರೂಪದಲ್ಲಿ ಪಡೆದುಕೊಂಡಿದ್ದರು. ಐಎಂಎ ಗೋಲ್ಡ್ ಸಂಸ್ಥೆಯಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಜಮೀರ್, ಬಡ್ಡಿಯ ರೂಪದಲ್ಲಿಯೂ ಕೂಡ ಹಣ ಪಡೆದುಕೊಂಡಿದ್ದರೆಂಬ ಮಾಹಿತಿ ತಿಳಿದುಬಂದಿದೆ.
ಮಾಜಿ ಸಚಿವರಾದ ಈ ಇಬ್ಬರೂ ಸದ್ಯ ಬಂಧನ ಭೀತಿಯಲ್ಲಿದ್ದಾರೆ.
PublicNext
05/08/2021 01:26 pm