ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

ಹೈದರಾಬಾದ್: ತೆಲಂಗಾಣದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ಅವರ ಮೃತದೇಹವು ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತೆಲಂಗಾಣದ ಮೇದಕ್ ಜಿಲ್ಲೆಯ ವೆಲ್ಡುರ್ತಿ ಮಂಡಲ ಮಂಗಳಪರ್ತಿ ಗ್ರಾಮ ಉಪನಗರದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿಯಲ್ಲಿ ಕಾರು ಉರಿಯುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಈ ವಿಚಾರವನ್ನು ಸರಪಂಚ್​ ರಾಮಕೃಷ್ಣ ರಾವ್ ಅವರಿಗೆ ತಿಳಿಸಿದ್ದಾರೆ. ಆದರೆ ಆ ಸಂದರ್ಭದಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಬೆಳಗ್ಗೆ ಮತ್ತೆ ಕಾರನ್ನು ಪರಿಶೀಲಿಸಿದ ಗ್ರಾಮಸ್ಥರಿಗೆ ಅದರಲ್ಲಿ ಮೃತದೇಹವಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ಪ್ರಕರಣದ ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರಿನ ನೋಂದಣಿ ಸಂಖ್ಯೆಯ ಆಧಾರದಲ್ಲಿ ಮೇದಕ್ ಪಟ್ಟಣದ ಬಿಜೆಪಿ ಮುಖಂಡ ಶ್ರೀನಿವಾಸ್ ಅವರು ಎಂದು ಗುರುತಿಸಿದ್ದಾರೆ. ಈ ಕೃತ್ಯವನ್ನು ಯಾವುದೋ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಎಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

Edited By : Vijay Kumar
PublicNext

PublicNext

11/08/2021 09:31 am

Cinque Terre

79.71 K

Cinque Terre

6

ಸಂಬಂಧಿತ ಸುದ್ದಿ