ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ಸತೀಶ್ ರೆಡ್ಡಿ ಮನೆಗೆ ನಳಿನ್ ಭೇಟಿ: ಕಾರು ಸುಟ್ಟ ಪ್ರಕರಣದಲ್ಲಿ ಮುಲಾಜೇ ಇಲ್ಲ

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಅವರಿಗೆ ಸೇರಿದ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆಂಕಿ ಹಚ್ಚಿದವರು ಯಾರೇ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸತೀಶ್ ರೆಡ್ಡಿ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದ ಹಿಂದೆ ಬೇರೆ ಯಾವುದಾದರೂ ಷಡ್ಯಂತ್ರ ಇರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಸತೀಶ್ ರೆಡ್ಡಿಗೆ ಮತ್ತಷ್ಟು ಭದ್ರತೆವಹಿಸಿ ಎಚ್ಚರಿಕೆಯಿಂದ ಇರಲು ಪೊಲೀಸರು ಸೂಚನೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

16/08/2021 08:04 am

Cinque Terre

57.62 K

Cinque Terre

2

ಸಂಬಂಧಿತ ಸುದ್ದಿ