ಬೆಂಗಳೂರು: ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಕಚೇರಿ ಬಾಗಿಲಿಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದ. ಚೆಲುವರಾಜು ಎಂಬ ಕೈ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನೋಹರ್ ತಂಡದಲ್ಲಿ ಈ ಕಾರ್ಯಕರ್ತ ಇದ್ದಾನೆ. ನಿನ್ನೆ ಮಂಗಳವಾರ ಯತ್ನಾಳ್ ಕಚೇರಿಯ ಬಾಗಿಲಿಗೆ ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಹಿನ್ನೆಲೆಯಲ್ಲಿ ಈತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
PublicNext
25/08/2021 12:12 pm