ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಜೆಡಿಎಸ್ ಕಾರ್ಯಕರ್ತನ ಮೇಲೆ ಎಫ್ಐಆರ್ ದಾಖಲಾಗಿದೆ.
ಹೆಚ್ಡಿಕೆ ಗಜಪಡೆ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಜೆಡಿಎಸ್ ಕಾರ್ಯಕರ್ತ ನರಸಿಂಹ ಮೂರ್ತಿ ಎಂಬಾತ ಜಮೀರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಭದ್ರತೆ ಇದ್ದರೂ ಹಲ್ಲೆ ಮಾಡಿ ಹತ್ಯೆ ಮಾಡುತ್ತೇವೆ ಎಂದು ವಿಡಿಯೋ ಮುಖಾಂತರ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನವೀನ್ ಗೌಡ ಎಂಬಾತ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
PublicNext
25/08/2021 04:11 pm