ಬೆಂಗಳೂರು: ಮೈಸೂರಿನಲ್ಲಿ ನಿನ್ನೆ ಬುಧವಾರ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವಿವಾದ ಸೃಷ್ಟಿಸಿದೆ. "ರೇಪ್ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಇಂತಹ ವಿಚಾರದಲ್ಲಿ ಹೀಗೆ ಮಾಡೋದಕ್ಕೆ ಹೋಗಬಾರದು. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು. ಯುವಕ, ಯುವತಿ 7.30 ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ, ಯುವತಿ ಶಾಕ್‌ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್‌ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
PublicNext
26/08/2021 03:37 pm