ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುದ್ಧನ ಮೂರ್ತಿ ಧ್ವಂಸ: ಕಿಡಿಗೇಡಿಗಳನ್ನು ಬಂಧಿಸುಬೇಕೆಂದು ಪ್ರತಿಭಟನೆ.!

ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ

ಯಾದಗಿರಿ: ಸುರಪುರ ನಗರದಲ್ಲಿ ಬುದ್ಧನ ಮೂರ್ತಿ ಧ್ವಂಸಗೊಳಿಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕಕ್ಕೇರಾ ಪಟ್ಟಣದಲ್ಲಿ ಸಾಮೂಹಿಕ ಸಂಘಟನೆಗಳು ಸೇರಿ ಪ್ರತಿಭಟನೆ ಮಾಡಿದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬುದ್ಧನ ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಇನ್ನು ಕಕ್ಕೇರಾ ಉಪ ತಹಶೀಲ್ದಾರ್ ಮೂಲಕ ಯಾದಗಿರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಶೋಷಿತರ ಪರ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ವೆಂಕೋಬ ದೊರೆ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬುಚ್ಚಪ್ಪ ನಾಯಕ, ಗಂಗಾಧರ ನಾಯಕ, ತಿಪ್ಪಣ್ಣ ಸೇರಿದಂತೆ ಇತರರು ಭಾಗಿಯಾಗಿದ್ದರು.

Edited By : Nagesh Gaonkar
PublicNext

PublicNext

26/08/2021 04:17 pm

Cinque Terre

68.3 K

Cinque Terre

0