ಚಾಮರಾಜನಗರ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 'ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳ ವಿಚಾರಣೆಯನ್ನು ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಆರೋಪಿಗಳು ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಾಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಸರ್ಕಾರ ಕೂಡ ಇಂತಹ ಪ್ರಕರಣಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.
PublicNext
26/08/2021 05:05 pm