ಬೆಂಗಳೂರು: ಜಮೀರ್ ಅಹ್ಮದ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್ ವಕ್ತಾರನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೆಚ್ಡಿಕೆ ಗಜಪಡೆ ಎಂಬ ಫೇಸ್ಬುಕ್ ಅಕೌಂಟ್‌ನಲ್ಲಿ ಭದ್ರತೆ ಇದ್ದರೂ ಹಲ್ಲೆ ಮಾಡಿ, ಹತ್ಯೆ ಮಾಡುತ್ತೇವೆ ಎಂದು ಜಮೀರ್ ಅಹ್ಮದ್ ಖಾನ್‌ಗೆ ವಿಡಿಯೋ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನವೀನ್ ಗೌಡ ಎಂಬುವವರು ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
PublicNext
26/08/2021 11:04 pm